ಕರ್ನಾಟಕ SSLC ಫಲಿತಾಂಶಕ್ಕೆ ಕ್ಷಣಗಣನೆ – ರಿಸಲ್ಟ್ ನೋಡುವುದು ಹೇಗೆ?

ಬೆಂಗಳೂರು : ಕರ್ನಾಟಕ SSLC ಪರೀಕ್ಷೆ-1 ಫಲಿತಾಂಶ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದಾದ್ಯಂತ ಸುಮಾರು 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆದಿದ್ದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇಂದು ಫಲಿತಾಂಶದ ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಬಗ್ಗೆ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ಮಾಹಿತಿ ನೀಡಲಿದ್ದಾರೆ.

ಪ್ರಸಕ್ತ ವರ್ಷ ಪರೀಕ್ಷೆಗಾಗಿ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ರಾಜ್ಯದಾದ್ಯಂತ ಪರೀಕ್ಷೆಗೆ ಹಾಜರಾಗಿದ್ದರು.

ಫಲಿತಾಂಶ ನೋಡುವುದು ಹೇಗೆ?

karresults.nic.in ಈ ವೆಬ್‌ಸೈಟ್​ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಷ್ಟೇ ಅಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೂ SMS ಮೂಲಕ ಫಲಿತಾಂಶ ಕಳುಹಿಸಲು ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.

ಇದನ್ನೂ ಓದಿ : ಬೀದರ್​ನ ಬಸವೇಶ್ವರ ಜಾತ್ರೆಯಲ್ಲಿ ಭೀಕರ ದುರಂತ – ರಥದ ಚಕ್ರಕ್ಕೆ ಸಿಲುಕಿ ಇಬ್ಬರಿಗೆ ಗಂಭೀರ ಗಾಯ!

Btv Kannada
Author: Btv Kannada

Leave a Comment

Read More