AAP ತೊರೆದು ಬಿಜೆಪಿ ಸೇರಿದ ಸಂಸದ ರಾಘವ್‌ ಚಡ್ಡಾ!

ನವದೆಹಲಿ : ಆಮ್ ಆದ್ಮಿ ಪಾರ್ಟಿಯ ಸಂಸದರಾಗಿದ್ದ ರಾಘವ್‌ ಚಡ್ಡಾ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ರಾಘವ್‌ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ (BJP) ಬೆಂಬಲ ಘೋಷಿಸಿದ್ದಾರೆ.

ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ. ಬಿಜೆಪಿಗೆ ಬೆಂಬಲಿಸುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ, ನಾನು ತಪ್ಪು ಪಕ್ಷದಲ್ಲಿ ಕೆಲಸ ಮಾಡುವ ಸರಿಯಾದ ವ್ಯಕ್ತಿ ಎಂದು ನನಗೆ ಅನಿಸುತ್ತಿದೆ. ಆದ್ದರಿಂದ, ಇಂದು ನಾನು ಎಎಪಿಯಿಂದ ದೂರ ಸರಿಯುತ್ತಿದ್ದೇನೆ ಮತ್ತು ಸಾರ್ವಜನಿಕರಿಗೆ ಹತ್ತಿರವಾಗುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ರಾಜ್ಯಸಭಾ ಸದಸ್ಯರಾದ ಸ್ವಾತಿ ಮಲಿವಾಲ್, ಹರ್ಭಜನ್ ಸಿಂಗ್ ನಮ್ಮ ಜೊತೆಗಿದ್ದಾರೆ. ರಾಜ್ಯಸಭೆಯಲ್ಲಿ ಆಪ್‌ನ 10 ಸದಸ್ಯರಿದ್ದಾರೆ. ಇದರಲ್ಲಿ 2/3 ಸಂಸದರು ನಮ್ಮ ಜೊತೆಗಿದ್ದಾರೆ. ನಾವು ರಾಜ್ಯಸಭೆ ಸಭಾಪತಿಗೆ ಮಾಹಿತಿ ನೀಡಿದ್ದೇವೆ. ಸಂವಿಧಾನದ ಅಡಿಯಲ್ಲಿ ನಾವು ಬಿಜೆಪಿಯೊಂದಿಗೆ ವಿಲೀನಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : BJP ಮುಖಂಡನ ಪುತ್ರನಿಂದ ಯುವತಿಗೆ ವಂಚನೆ ಕೇಸ್ – ಹೈಕೋರ್ಟ್​​ನಿಂದ ಮಹತ್ವದ ಆದೇಶ!

Btv Kannada
Author: Btv Kannada

Leave a Comment

Read More