ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಸಂಜೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗುತ್ತಿವೆ. RCB ತಂಡ ಈ ಬಾರಿ IPLನಲ್ಲಿ ತನ್ನ ತವರು ಕ್ರೀಡಾಂಗಣದಲ್ಲಿ ಕೊನೆ ಲೀಗ್ ಪಂದ್ಯವಾಡಲಿದೆ.
RCBಗೆ ಗುಜರಾತ್ ಟೈಟಾನ್ಸ್ ಸವಾಲು ಎದುರಾಗಲಿದ್ದು, ಗೆಲುವಿನ ಮೂಲಕ ಚಿನ್ನಸ್ವಾಮಿಗೆ ವಿದಾಯ ಹೇಳಲು ಕಾಯುತ್ತಿದೆ. ಈ ಪಂದ್ಯದ ಬಳಿಕ ಆರ್‌ಸಿಬಿ ತನ್ನ 2ನೇ ತವರು ಕ್ರೀಡಾಂಗಣ ರಾಯ್ಪುರದಲ್ಲಿ ಮುಖ ಮಾಡಲಿದೆ.
ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿಯಲ್ಲಿ ಆಡಿದ 4 ಪಂದ್ಯಗಳ ಪೈಕಿ 3ರಲ್ಲಿ ಗೆದ್ದಿದೆ. ತನ್ನ ಕೊನೆ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತಿದ್ದ ತಂಡ ಈಗ ಗೆಲುವಿನ ಹಳಿಗೆ ಮರಳುವ ಕಾತರದಲ್ಲಿದ್ದು, ಒಟ್ಟಾರೆ 5ನೇ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮತ್ತೆ 2ನೇ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಗುಜರಾತ್ 6 ಪಂದ್ಯಗಳ ಪೈಕಿ 3ರಲ್ಲಿ ಗೆದ್ದಿದ್ದು, ಸ್ಥಿರತೆ ಕಾಯ್ದುಕೊಂಡು ಗೆಲುವಿನ ಹಳಿಗೆ ಮರಳಲು ಕಾಯುತ್ತಿದೆ.
ಇನ್ನು ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಳೆದ ಪಂದ್ಯಗಳ ಅನುಭವದ ಆಧಾರದ ಮೇಲೆ ಪೊಲೀಸರು ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಸುಮಾರು 2,300 ಪೊಲೀಸ್ ಸಿಬ್ಬಂದಿ ಪಂದ್ಯದ ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ. ಡಿಸಿಪಿ, ಎಸಿಪಿ ಮತ್ತು ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳ ನೇತೃತ್ವದಲ್ಲಿ ಜನಜಂಗುಳಿ ನಿಯಂತ್ರಿಸಲು ಭದ್ರತಾ ಪ್ಲಾನ್ ಸಿದ್ಧಪಡಿಸಲಾಗಿದೆ.
ಇದನ್ನೂ ಓದಿ : ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳ ಕಾಲ ವಿಸ್ತರಣೆ – ಟ್ರಂಪ್ ಘೋಷಣೆ!









