ದೈವಕ್ಕೆ ಅಪಮಾನ – ಕ್ಷಮೆಯಾಚಿಸಿದ ಬಾಲಿವುಡ್ ನಟ ರಣವೀರ್ ಸಿಂಗ್!

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಚಾವುಂಡಿ ದೈವಕ್ಕೆ ಅಪಮಾನ ಮಾಡಿರೋದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಚಾವುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರಲ್ಲ ಎಂದು ಹೇಳಿದ್ದಾರೆ.

 ಕೋರ್ಟ್ ನಿರ್ದೇಶನದ ಮೇಲೆ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವುದಕ್ಕೆ ಹೈಕೋರ್ಟ್ ಮೊರೆ ಹೋಗಿದ್ದ ರಣವೀರ್ ಇದೀಗ ಬೇಷರತ್ ಕ್ಷಮೆಯಾಚಿಸಿದ್ದಾರೆ. 

ಇನ್ನು ಯಾವ ಧರ್ಮದ ಬಗ್ಗೆಯೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಧಕ್ಕೆ ತರುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಈ ಘಟನೆ ಉದ್ದೇಶಪೂರ್ವಕವಾಗಿ ಆಗಿರೋದಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

ಈ ಪ್ರಕರಣ ಸಂಬಂಧ ಸುದೀರ್ಘವಾದ ವಿಚಾರಣೆ ನಡೆಸಿದ ನ್ಯಾಯಾಲಯ ಬೇಷರತ್ ಕ್ಷಮೆ ಸ್ವೀಕಾರ ಮಾಡಿ ಅರ್ಜಿ ಇತ್ಯರ್ಥಪಡಿಸಿದೆ. ಈ ಮೂಲಕ ಮುಜುಗರಕ್ಕೆ ಸಿಲುಕಿದ್ದ ರಣವೀರ್‌ಗೆ ಸದ್ಯ ರಿಲೀಫ್ ಸಿಕ್ಕಿದೆ.

ಇದನ್ನೂ ಓದಿ : ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

Btv Kannada
Author: Btv Kannada

Leave a Comment

Read More

Read More