ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ!

ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಇದೀಗ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ಗೆ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪು ಹೊರಡಿಸಿತ್ತು.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆಯಾದ ಪರಿಣಾಮ, ಅವರ ಶಾಸಕ ಸ್ಥಾನಕ್ಕೆ ಕುತ್ತು ತಂದಿತ್ತು. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ನೀಡಿ, ಅಮಾನತಿನಲ್ಲಿ ಇಡುವಂತೆ ಮನವಿ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ : ಗೋಲ್ಡನ್ ಸ್ಟಾರ್ ಗಣೇಶ್ ಸಿನಿ ಪಯಣಕ್ಕೆ 20 ವರ್ಷ – ‘ಪಿನಾಕ’ ಸೆಟ್‌ನಲ್ಲಿ ಅದ್ಧೂರಿ ಗೌರವ!

Btv Kannada
Author: Btv Kannada

Leave a Comment

Read More

Read More