ಬೆಂಗಳೂರು : ಕನ್ನಡದ ವರನಟ ಡಾ. ರಾಜ್ಕುಮಾರ್ ಅವರ ಸ್ಮಾರಕದ ವಿಚಾರ ಸಂಬಂಧ JDS ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿಕಾರಿದ್ದಾರೆ.
ಸ್ಮಾರಕದ ಜಾಗದ ವಿಚಾರವಾಗಿ ಪ್ರತಿಕ್ರಿಯಿಸಿದ್ದ ನಿಖಿಲ್, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್ಗೆ ಯೋಗ್ಯತೆ ಇಲ್ಲ’ ಎಂದು ಹೇಳಿದ್ದರು. ಇದೀಗ ನಿಖಿಲ್ ಹೇಳಿಕೆಗೆ ನಟ ಚೇತನ್ ಅಹಿಂಸಾ ಫೇಸ್ಬುಕ್ನಲ್ಲಿ ಟಾಂಗ್ ಕೊಟ್ಟಿದ್ದಾರೆ. ‘ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ. ಆದರೆ, ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ‘ಯೋಗ್ಯ’?. ಮಾಜಿ ಪ್ರಧಾನಿಯ ಮಗ, 2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ? ಅಥವಾ ಅವರ ಮಗ, ಮೂರು ಬಾರಿ ಸೋತವರು, ಸ್ವಜನಪಕ್ಷಪಾತ ಹೊರತುಪಡಿಸಿ ಮತ್ತೇನು ಸಾಧನೆ ಇಲ್ಲದವರಾ?’ ಎಂದು ಟೀಕಿಸಿದ್ದಾರೆ.
ನಿಖಿಲ್ ಹೇಳಿದ್ದೇನು?
‘ಅಣ್ಣಾವ್ರು ಯಾವತ್ತೂ ಏನನ್ನೂ ಬಯಸಿದ ವ್ಯಕ್ತಿ ಅಲ್ಲ. ಅಂಥ ವ್ಯಕ್ತಿ ರಾಜ್ಯದಲ್ಲಿ ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ. ಡಾ.ರಾಜ್ಕುಮಾರ್ ಸ್ಮಾರಕದ ಬಗ್ಗೆ ಮಾತನಾಡುವ ಯೋಗ್ಯತೆ ಚೇತನ್ ಅವರಿಗಿಲ್ಲ. ಅವರೊಬ್ಬ ಪ್ರಚಾರಪ್ರಿಯ’ ಎಂದು ನಿಖಿಲ್ ಹೇಳಿದ್ದರು.
ಇದನ್ನೂ ಓದಿ : IGP ಹರ್ಷ ಪಿ.ಎಸ್ ಅವರಿಗೆ ಕುವೆಂಪು ವಿಶ್ವವಿದ್ಯಾನಿಲಯದಿಂದ ಪಿಎಚ್ಡಿ!









