ರಾಜ್ಯದ ಹಲವೆಡೆ ಮುಂದಿನ 3 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

ಬೆಂಗಳೂರು : ರಾಜ್ಯದ ಹಲವೆಡೆ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವರುಣನ ಅಬ್ಬರ ಮುಂದುವರಿದಿದೆ. ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ತಾಪಮಾನದಲ್ಲಿ ಅಲ್ಪ ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮೇ 8 ಮತ್ತು 9ರಂದು ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮೇ 8ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : ‘ಸರ್ಸೆ ನಿನ್ನ ಸೆರಗ’ ವಿವಾದ – ಕ್ಷಮೆಯಾಚಿಸಿದ ನಟಿ ನೋರಾ ಫತೇಹಿ!

Btv Kannada
Author: Btv Kannada

Leave a Comment

Read More