ಬಿಟ್ ಕಾಯಿನ್ ಹಗರಣ – ಆರೋಪಿ ಶ್ರೀಕಿ ಸೇರಿ ಮೂವರು ಅರೆಸ್ಟ್!

ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಇದೀಗ ಮೂವರು ಆರೋಪಿಗಳನ್ನು ಬಂಧಿಸಿದೆ. ಶ್ರೀಕಿ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ಬಂಧಿತ ಆರೋಪಿಗಳು.

ನಿನ್ನೆ ರಾತ್ರಿ ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇಂದು ಬೆಳಿಗ್ಗೆ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದಾರೆ. ಸದ್ಯ ಆರೋಪಿಗಳನ್ನು ಇಡಿ ಅಧಿಕಾರಿಗಳು 10 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಇಡಿ ಅಧಿಕಾರಿಗಳು ಶ್ರೀಕಿ, ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ನಲಪಾಡ್ ಮತ್ತು ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಅವರ ಮೊಮ್ಮಗ ಹಕೀಬ್ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿ ನಂತರ ಬಂಧನ ಕಾರ್ಯಾಚರಣೆ ನಡೆದಿದೆ.

ಇನ್ನು ಬಿಟ್ ಕಾಯಿನ್ ಹಗರಣದ ಸಂಪೂರ್ಣ ಜಾಲ, ಹ್ಯಾಕಿಂಗ್, ಹಣ ವರ್ಗಾವಣೆ, ಮಧ್ಯವರ್ತಿಗಳ ಪಾತ್ರ ಎಲ್ಲವನ್ನೂ ವಿಚಾರಣೆಯ ಮೂಲಕ ತಿಳಿದುಕೊಳ್ಳುವ ಪ್ರಯತ್ನ ನಡೆಯಲಿದೆ.

ಇದನ್ನೂ ಓದಿ : ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ!

Btv Kannada
Author: Btv Kannada

Leave a Comment

Read More