ಬೆಂಗಳೂರು : ನಗರದ ನಾಗರಬಾವಿಯ ಹೋಟೆಲ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ರಾಜಕುಮಾರ್ (45) ಮೃತ ದುರ್ದೈವಿ.

ಮಾಳಗಾಳದ ದುರ್ಗಶ್ರೀ ಗ್ರಾಂಡ್ ಹೋಟೆಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : 1 ಲಕ್ಷ ಲಂಚಕ್ಕೆ ಡಿಮ್ಯಾಂಡ್ – ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ಪೆಕ್ಟರ್!
Author: Btv Kannada
Post Views: 295









