ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ!

ಕೋಲ್ಕತ್ತಾ : ಸುವೇಂದು ಅಧಿಕಾರಿ ಅವರು ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು NDAಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಾದ ಇಂದೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸುವೇಂದು ಅಧಿಕಾರಿ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಮತ್ತು ಶಾಸಕರ ಮುಂದೆ ಘೋಷಿಸಿದರು. ಬಂಗಾಳದಲ್ಲಿ ಹೊಸ ಸರ್ಕಾರವನ್ನು ಮುನ್ನಡೆಸಲು ಬಿಜೆಪಿ ಶಾಸಕಾಂಗ ಪಕ್ಷವು ಸುವೇಂದು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಹೇಳಿದರು. ಇದೀಗ ಸುವೇಂದು ಅಧಿಕಾರಿ ಅವರು ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೂಡಲೇ ಅಧಿಕಾರಿ ಅವರು ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್ ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಔಪಚಾರಿಕವಾಗಿ ಹಕ್ಕು ಮಂಡಿಸಿದರು. 

ಇದನ್ನೂ ಓದಿ : ನಾಗರಬಾವಿ ಹೋಟೆಲ್‌ನಲ್ಲಿ ಅಗ್ನಿ ಅವಘಡ – ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ!

Btv Kannada
Author: Btv Kannada

Leave a Comment

Read More