ಬೆಂಗಳೂರು : ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ HAL ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಬಿಜೆಪಿ ನಾಯಕರಿಂದ ಅದ್ಧೂರಿ ಸನ್ಮಾನ ನಡೆಯಿತು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರಿಗೆ 13 ಕೆಜಿ ತೂಕದ ಬೆಳ್ಳಿಯ ಪ್ರತಿಮೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರಾದ ಅಶ್ವತ್ಥ್ ನಾರಾಯಣ್, ಎಸ್.ಆರ್. ವಿಶ್ವನಾಥ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಇದನ್ನೂ ಓದಿ : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣವಚನ ಸ್ವೀಕಾರ!
Author: Btv Kannada
Post Views: 221







