ಚಿತ್ರದುರ್ಗ : ರಾಜ್ಯ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಡಿ. ಸುಧಾಕರ್ ಅವರು 2004ರಲ್ಲಿ ಚಳ್ಳಕೆರೆಯಿಂದ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ನಂತರದ ದಿನಗಳಲ್ಲಿ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ್ದರು. ಅವರು ಬಿಜೆಪಿ ಹಾಗೂ ಕಾಂಗ್ರೆಸ್ ಎರಡು ಪಕ್ಷಗಳಲ್ಲೂ ಸಚಿವರಾಗಿ ಶ್ರಮಿಸಿದವರು. ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ ಹೆಸರಾಗಿದ್ದರು.

ಸದ್ಯ ಅವರು ಸಿಎಂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿ ಮತ್ತು ಚಿತ್ರದುರ್ಗ ಜಿಲ್ಲೆಯ ಸಚಿವರಾಗಿದ್ದರು.
ಇದನ್ನೂ ಓದಿ : ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಭೇಟಿ – ಸಂಚಾರ ಮಾರ್ಗಗಳಲ್ಲಿ ಬದಲಾವಣೆ!
Author: Btv Kannada
Post Views: 146







