ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ – ಮೇ.3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು!

ನವದೆಹಲಿ : ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ರದ್ದುಗೊಳಿಸಿದೆ.

ರಾಜಸ್ಥಾನದ ಸೀಕರ್‌ನಲ್ಲಿ ಕೈಬರಹದಲ್ಲಿದ್ದ 140 ಪ್ರಶ್ನೆಗಳಿದ್ದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಪತ್ತೆಯಾಗಿತ್ತು. ಈ ಬಗ್ಗೆ ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಗುಂಪು (SOG) ಈಗಾಗಲೇ ತನಿಖೆ ಆರಂಭಿಸಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪರೀಕ್ಷಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಲು ಕೇಂದ್ರ ಸರ್ಕಾರವು ಸಂಪೂರ್ಣ ತನಿಖೆಯನ್ನು ಸಿಬಿಐಗೆ (CBI) ವಹಿಸಿದೆ.

ರದ್ದಾದ ಪರೀಕ್ಷೆಯನ್ನು ಮರು ನಿಗದಿಪಡಿಸಲಾಗುವುದು. ಹೊಸ ಪರೀಕ್ಷಾ ದಿನಾಂಕ ಮತ್ತು ಹೊಸ ಪ್ರವೇಶ ಪತ್ರಗಳ ಮಾಹಿತಿಯನ್ನು ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. 

ಇದನ್ನೂ ಓದಿ : ಇಂದಿರಾಗಾಂಧಿ ಹೇಳಿದರೆ ಶಿಸ್ತು, ಇಂದು ಮೋದಿ ಹೇಳಿದರೆ ತಪ್ಪು – ಕಾಂಗ್ರೆಸ್‌ ಟೀಕೆಗೆ ಅಶೋಕ್‌ ಟಾಂಗ್!

Btv Kannada
Author: Btv Kannada

Leave a Comment

Read More