ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ರಾಮನಗರ ತಾಲೂಕಿನ ಗುನ್ನೂರು ಗ್ರಾಮದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ದಿಲೀಪ್ ರಾಜ್ ಅವರು 2005ರಲ್ಲಿ ಬಿಡುಗಡೆಯಾದ ಬಾಯ್‌ಫ್ರೆಂಡ್ ಸಿನಿಮಾದಲ್ಲಿ ನಾಯಕನಾಗಿ ನಟಿಸುವ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು. ನಂತರ ಮಿಲನ ಸಿನಿಮಾದಲ್ಲಿ ವಿಲನ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದರು.

ಸುಗ್ರೀವ, ಗೆಳೆಯ, ಯೂಟರ್ನ್, ಸೇರಿದಂತೆ 28 ಚಿತ್ರಗಳಲ್ಲಿ ದಿಲೀಪ್ ರಾಜ್ ನಟಿಸಿದ್ದಾರೆ. ಸದ್ಯ ಜನಪ್ರಿಯ ಧಾರಾವಾಹಿ `ಕೃಷ್ಣ ರುಕ್ಕು’ ಧಾರವಾಹಿ ಪ್ರೊಡ್ಯೂಸ್ ಮಾಡುತ್ತಿದ್ದರು. 47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಮನೆಯೊಂದು ಮೂರು ಬಾಗಿಲು, ರಥಸಪ್ತಮಿ, ಪ್ರೀತಿಗಾಗಿ ಧಾರಾವಾಹಿಗಳಲ್ಲೂ ನಟಿಸಿದ್ದರು.
ಇದನ್ನೂ ಓದಿ : ವಿಶ್ವಾಸಮತ ಗೆದ್ದ ಸಿಎಂ ವಿಜಯ್ – ಸರ್ಕಾರಕ್ಕೆ 144 ಶಾಸಕರ ಬೆಂಬಲ!









