ವಿಶ್ವಾಸಮತ ಗೆದ್ದ ಸಿಎಂ ವಿಜಯ್‌ – ಸರ್ಕಾರಕ್ಕೆ 144 ಶಾಸಕರ ಬೆಂಬಲ!

ಚೆನ್ನೈ : ತಮಿಳುನಾಡು ವಿಧಾನಸಭೆಯಲ್ಲಿ ಇಂದು ನಡೆದ ಮಹತ್ವದ ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಜೋಸೆಫ್ ವಿಜಯ್​ ಗೆಲುವು ಸಾಧಿಸಿದ್ದಾರೆ. 

ಸದನದಲ್ಲಿ ಮಂಡಿಸಲಾದ ವಿಶ್ವಾಸಮತ ನಿರ್ಣಯದ ಪರವಾಗಿ ಬರೋಬ್ಬರಿ 144 ಶಾಸಕರು ಮತ ಚಲಾಯಿಸುವುದರೊಂದಿಗೆ ವಿಜಯ್ ಅವರು ತಮ್ಮ ಬಹುಮತವನ್ನು ಯಶಸ್ವಿಯಾಗಿ ಸಾಬೀತುಪಡಿಸಿದ್ದಾರೆ.

ವಿಜಯ್ ಸರ್ಕಾರಕ್ಕೆ ಕಾಂಗ್ರೆಸ್​ನ ಐವರು ಶಾಸಕರು, ವಿಸಿಕೆಯ ಇಬ್ಬರು, ಸಿಪಿಐನ ಇಬ್ಬರು ಶಾಸಕರು, ಸಿಪಿಐ(ಎಂ) ಇಬ್ಬರು, ಐಯುಎಂಎಲ್​ ಪಕ್ಷದ ಇಬ್ಬರು ಶಾಸಕರು ಶಾಸಕರು ಸೇರಿದಂತೆ ಒಟ್ಟು 144 ಜನ ಶಾಸಕರ ಬೆಂಬಲ ದೊರೆತಿದೆ. 

ಎಐಎಡಿಎಂಕೆಯ 25 ಮಂದಿ ಬಂಡಾಯ ಶಾಸಕರೂ ವಿಜಯ್ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ. ವೇಲುಮಣಿ ಮತ್ತು ಷಣ್ಮುಗಂ ಶಾಸಕರು ನೇತೃತ್ವದ ಬಂಡಾಯ ಶಾಸಕರು ಪಕ್ಷದ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ನಿಲುವನ್ನು ಧಿಕ್ಕರಿಸಿ ವಿಜಯ್ ಸರ್ಕಾರವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು!

Btv Kannada
Author: Btv Kannada

Leave a Comment

Read More