ಚೆನ್ನೈ: ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು ಮುಖ್ಯಮಂತ್ರಿ ವಿಜಯ್ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕ ಮಾಡಿಕೊಂಡಿದ್ದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ತಮ್ಮ ವಿಶೇಷ ಅಧಿಕಾರಿಯಾಗಿ ಜ್ಯೋತಿಷಿ ರಾಧನ್ ಪಂಡಿತ್ ಅವರ ನೇಮಕ ಆದೇಶವನ್ನು ತಮಿಳುನಾಡು ಸಿಎಂ ವಿಜಯ್ ಹಿಂಪಡೆದಿದ್ದಾರೆ.

ಜ್ಯೋತಿಷಿ ರಾಧನ್ ಪಂಡಿತ್ ಅವರನ್ನು ಮುಖ್ಯಮಂತ್ರಿಗಳ ಇಲಾಖೆಯಲ್ಲಿ OSD ಆಗಿ ನೇಮಕ ಮಾಡಿದ ಒಂದು ದಿನದೊಳಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ನೇಮಕಾತಿ ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಡುತಲೈ ಚಿರುತೈಗಳ್ ಕಚ್ಚಿ (ವಿಸಿಕೆ), ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ-ಮ್ಯಾಟ್ರಿಕ್ಸ್ (ಸಿಪಿಐಎಂ) ಹಾಗೂ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಈ ಬಗ್ಗೆ ಟೀಕಿಸಿದ್ದವು. ಇನ್ನು ವಿಧಾನಸಭೆಯ ವಿಶ್ವಾಸಮತ ಪರೀಕ್ಷೆಗೆ ಮುನ್ನ ವಿಸಿಕೆ ಶಾಸಕಿ ವಾಣಿ ಅರುಸು, ಸರ್ಕಾರ ವೈಜ್ಞಾನಿಕ ಹಾಗೂ ತಾರ್ಕಿಕ ಚಿಂತನೆಗೆ ಆದ್ಯತೆ ನೀಡಬೇಕು, ಮೂಢನಂಬಿಕೆಗಳಿಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದರು.
ಇದನ್ನೂ ಓದಿ : ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ!








