ಬೆಂಗಳೂರು : ಸ್ಯಾಂಡಲ್ವುಡ್ ನಟ, ನಿರ್ಮಾಪಕ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿಲೀಪ್ ರಾಜ್ ಅವರಿಗೆ ಇಂದು ಬೆಳಗಿನ ಜಾವ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನಟ ದಿ.ಪುನೀತ್ ರಾಜ್ ಕುಮಾರ್ ಅಭಿನಯನದ ‘ಮಿಲನ’ ಸಿನಿಮಾ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರವಾಹಿ ಮೂಲಕ ಕಮ್ ಬ್ಯಾಕ್ ಮಾಡಿದ್ದ ನಟ ಮನೆ ಮಾತಾಗಿದ್ದರು.
‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.
ಇದನ್ನೂ ಓದಿ : ಕನ್ನಡದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!









