ಕೊಲ್ಕತಾ : ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರಿ ಕೋಟ್ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಹಾಗೂ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆಯ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಮಮತಾ ಬ್ಯಾನರ್ಜಿ ಅವರು ಲಾಯರ್ ಕೋಟ್ ಧರಿಸಿ ಹೈಕೋರ್ಟ್‌ಗೆ ಎಂಟ್ರಿ ಕೊಟ್ಟ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ.
ರಾಜಕೀಯಕ್ಕೆ ಪ್ರವೇಶಿಸುವ ಮೊದಲು ವೃತ್ತಿಪರ ವಕೀಲರಾಗಿದ್ದ ಮಮತಾ ಬ್ಯಾನರ್ಜಿ, ಹಲವು ದಶಕಗಳ ಬಳಿಕ ಮತ್ತೆ ವಕೀಲರ ಕೋಟ್ನಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಇತ್ತೀಚಿನ 2026ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ, ಚುನಾವಣಾ ಪ್ರಕ್ರಿಯೆಯಲ್ಲಿನ ಲೋಪದೋಷಗಳ ವಿರುದ್ಧ ಕಾನೂನು ಹೋರಾಟ ಆರಂಭಿಸಲು ಅವರು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಮಮತಾ ಬ್ಯಾನರ್ಜಿ ಸ್ವತಃ ನ್ಯಾಯಾಲಯದಲ್ಲಿ ವಾದ ಮಂಡಿಸಲು ಅಥವಾ ಕಾನೂನು ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಲು ಈ ಹೆಜ್ಜೆ ಇಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ!









