ನಟ ದರ್ಶನ್‌ಗೆ ಸುಪ್ರೀಂನಲ್ಲೂ ಜಾಮೀನು ನಿರಾಕರಣೆ – ಇನ್ನೂ 1 ವರ್ಷ ಜೈಲೇ ಗತಿ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ನಟ ದರ್ಶನ್​ಗೆ ನಿರಾಸೆಯಾಗಿದೆ. ಇನ್ನೂ ಒಂದು ವರ್ಷ ದರ್ಶನ್​ಗೆ ಜಾಮೀನು ಭಾಗ್ಯ ಇಲ್ಲ. ಮೇ.15 2027 ರವರೆಗೆ ದರ್ಶನ್​ಗೆ ಜೈಲು ಶಿಕ್ಷೆ ಮುಂದುವರೆಯಲಿದೆ ಎಂದು ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ದರ್ಶನ್ ಪರ ವಕೀಲರು ಹಾಗೂ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಾದ ಆಲಿಸಿದ ಸುಪ್ರೀಂ ಕೋರ್ಟ್ ದರ್ಶನ್​​ ಜಾಮೀನು ಅರ್ಜಿಯನ್ನು ಪುರಸ್ಕರಿಸಿಲ್ಲ. ಬದಲಿಗೆ ಒಂದು ವರ್ಷದ ಕಾಲಾವಕಾಶವನ್ನು ನೀಡಿದೆ.

ಈ ಪ್ರಕರಣದ ವಿಚಾರಣೆಯನ್ನು 1 ವರ್ಷದೊಳಗೆ ಮುಗಿಸಬೇಕು, ಪ್ರತಿದಿನ ಕೆಳನ್ಯಾಯಾಲಯ ವಿಚಾರಣೆ ನಡೆಸಬೇಕು. ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಜಾಮೀನು ನಿರಾಕರಿಸಿದರೂ ಸಹ, ದರ್ಶನ್ ಅವರಿಗೆ ಜೈಲಿನಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದೆ. 

ಇನ್ನು ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಸ್ಥಳಾಂತರಿಸುವ ಬಗ್ಗೆ ಅಥವಾ ಬೇರೆಡೆಗೆ ಬದಲಾಯಿಸುವ ಬಗ್ಗೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಈ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ಆದೇಶವನ್ನು ನೀಡಿಲ್ಲ. ಹೀಗಾಗಿ ದರ್ಶನ್ ಸದ್ಯಕ್ಕೆ ಕ್ವಾರಂಟೈನ್ ಸೆಲ್‌ನಲ್ಲೇ ಮುಂದುವರಿಯಬೇಕಿದೆ.

ಇದನ್ನೂ ಓದಿ : ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ!

Btv Kannada
Author: Btv Kannada

Leave a Comment

Read More