ಬೆಂಗಳೂರು : ಜಾಗತಿಕ ಆರ್ಥಿಕ ಸಂಕಷ್ಟ ಹಾಗೂ ಇಂಧನ ಉಳಿತಾಯ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಮಿತವ್ಯಯದ ಕರೆಗೆ ಸ್ಪಂದಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೆಟ್ರೋದಲ್ಲಿ ಪ್ರಯಾಣಿಸಿದರು.

ವಿಜಯೇಂದ್ರ ಅವರು ಮೆಜೆಸ್ಟಿಕ್ನಿಂದ ಕೆಂಗೇರಿ/ಚಲ್ಲಘಟ್ಟ ಮಾರ್ಗದವರೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿ ಕುಂಬಳಗೋಡು ಭಾಗದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚೆಗೆ ಪ್ರಧಾನಿ ಮೋದಿ ದೇಶದ ಜನತೆಗೆ ಇಂಧನ ಮಿತಬಳಕೆ, ಸಾರ್ವಜನಿಕ ಸಾರಿಗೆ ಬಳಕೆ ಹಾಗೂ ವೆಚ್ಚ ನಿಯಂತ್ರಣ ಕುರಿತು ಕರೆ ನೀಡಿದ್ದರು. ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಕೂಡ ಮಿತವ್ಯಯ ಕ್ರಮಗಳನ್ನು ಅನುಸರಿಸಲು ಆರಂಭಿಸಿದ್ದಾರೆ.
ಇದನ್ನೂ ಓದಿ : ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್ – ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!
Author: Btv Kannada
Post Views: 245







