ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲಿನಲ್ಲಿ ದಿಢೀರನೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟುಹೋಗಿದೆ.

ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರು ದಟ್ಟವಾದ ಬೆಂಕಿಯನ್ನು ಕಂಡು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.
ಈ ಪ್ಯಾಸೆಂಜರ್ ರೈಲು ಸಾಸಾರಾಮ್‌ನಿಂದ ಪಟ್ನಾ ಕಡೆಗೆ ಹೊರಡಲು ಸಿದ್ಧವಾಗಿತ್ತು. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ : ರಷ್ಯಾ ರಾಜಧಾನಿ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ – ಓರ್ವ ಭಾರತೀಯ ಸಾವು, ಮೂವರಿಗೆ ಗಂಭೀರ ಗಾಯ!
Author: Btv Kannada
Post Views: 173








