ತಿರುವನಂತಪುರಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ಇತ್ತೀಚೆಗೆ ನಡೆದ ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಆಯ್ಕೆ ಮಾಡಿದೆ.

ಕಾಂಗ್ರೆಸ್ನಿಂದ 11 ಮಂದಿ, ಮುಸ್ಲಿಂ ಲೀಗ್ನ ಐವರು ಹಾಗೂ ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರಿಗೂ ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಓದಿ : ಪ್ಯಾಸೆಂಜರ್ ರೈಲಿನಲ್ಲಿ ಭಾರಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್ ಶಂಕೆ!
Author: Btv Kannada
Post Views: 220








