ತಮಿಳುನಾಡು ಪ್ರವಾಸದಲ್ಲಿ ಪ್ರತಿಪಕ್ಷ ನಾಯಕ ಅಶೋಕ್!

ತಮಿಳುನಾಡು : ವಿಪಕ್ಷ ನಾಯಕ ಆರ್. ಅಶೋಕ್ ಇಂದು ತಮಿಳುನಾಡಿನ ಹೊಸೂರಿನಲ್ಲಿರುವ ಪ್ರಸಿದ್ಧ ಚಂದ್ರಚೂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಕೃಷ್ಣಗಿರಿ ಜಿಲ್ಲೆ ಹಾಗೂ ಥಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಧನ್ಯವಾದ ಸಮಾರಂಭದಲ್ಲಿ ಆರ್. ಅಶೋಕ್ ಭಾಗವಹಿಸಿದ್ದಾರೆ.

ನಮ್ಮ ಪಕ್ಷದ ಅಭ್ಯರ್ಥಿ ಡಾ.ನಾಗೇಶ್ ಕುಮಾರ್ ಅವರು ಕೇವಲ 5,240 ಮತಗಳ ಅಂತರದಿಂದ ಸೋಲು ಕಂಡಿದ್ದರೂ, ಥಳಿ ಕ್ಷೇತ್ರದ ಜನತೆ ನೀಡಿದ ಅಪಾರ ಬೆಂಬಲ ಅತ್ಯಂತ ಪ್ರೇರಣಾದಾಯಕವಾಗಿದೆ. ಇದು ಭಾಜಪ ತಮಿಳುನಾಡಿನಲ್ಲಿ ದಿನೇದಿನೇ ಬಲಿಷ್ಠವಾಗಿ ಬೆಳೆಯುತ್ತಿರುವುದರ ಸ್ಪಷ್ಟ ಸಂಕೇತವಾಗಿದೆ. ಗೆಲುವು-ಸೋಲುಗಳು ಪ್ರಜಾಪ್ರಭುತ್ವದ ಭಾಗ. ಆದರೆ ಜನತೆ ತೋರಿದ ವಿಶ್ವಾಸ, ಕಾರ್ಯಕರ್ತರ ಸಮರ್ಪಣೆ ಮತ್ತು ಪಕ್ಷದ ಮೇಲಿನ ನಂಬಿಕೆ ನಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.

ಸಮಾರಂಭದಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ನಿರಾಶೆಯಾಗದೆ ಇನ್ನಷ್ಟು ಸಂಘಟಿತವಾಗಿ ಜನರ ಮಧ್ಯೆ ಕೆಲಸ ಮಾಡುವಂತೆ ಕರೆ ನೀಡಿ, ಮುಂದಿನ ದಿನಗಳಲ್ಲಿ ಥಳಿ ಕ್ಷೇತ್ರದಲ್ಲಿ ಬಿಜೆಪಿ ವಿಜಯದ ಹೊಸ ಇತಿಹಾಸ ನಿರ್ಮಿಸಲಿದೆ ಎಂಬ ದೃಢ ವಿಶ್ವಾಸ ತುಂಬಿದ್ದಾರೆ.

ಜನರ ಆಶೀರ್ವಾದ ಮತ್ತು ಕಾರ್ಯಕರ್ತರ ಪರಿಶ್ರಮದೊಂದಿಗೆ ತಮಿಳುನಾಡಿನಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಸ್ಥಳೀಯ ನಾಯಕರು ಹಾಗೂ ನಿಸ್ವಾರ್ಥ ಕಾರ್ಯಕರ್ತರಿಗೆ ಆರ್. ಅಶೋಕ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ದೇವಸ್ಥಾನಗಳ ಚಿನ್ನದಿಂದ ಹಣಗಳಿಸುವ ಯೋಜನೆ ಇಲ್ಲ – ಕೇಂದ್ರ ಸರ್ಕಾರ ಸ್ಪಷ್ಟನೆ!

Btv Kannada
Author: Btv Kannada

Leave a Comment

Read More

Read More