ಬೆಂಗಳೂರು : ಹೈಕೋರ್ಟ್ ತಡೆ ಬೆನ್ನಲ್ಲೇ ನಾಳೆ ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. KSRTC ಜಂಟಿ ಕ್ರಿಯಾ ಸಮಿತಿ ಹೈಕೋರ್ಟ್ ತೀರ್ಪಿಗೆ ಗೌರವ ಸಲ್ಲಿಸಿ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಹೀಗಾಗಿ ನಾಳೆ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಇರಲಿದೆ.
ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್ ನಿರ್ದೇಶನ ಕೊಟ್ಟಿದೆ.
ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಹೈಕೋರ್ಟ್ ಹೇಳಿದೆ. ಹೈಕೋರ್ಟ್ ಆದೇಶದ ಪ್ರಕಾರ ಸಾರಿಗೆ ನೌಕರರು ಮುಷ್ಕರ ಹಿಂಪಡೆದಿದ್ದಾರೆ.
ಇದನ್ನೂ ಓದಿ : ತಮಿಳುನಾಡು ಪ್ರವಾಸದಲ್ಲಿ ಪ್ರತಿಪಕ್ಷ ನಾಯಕ ಅಶೋಕ್!
Author: Btv Kannada
Post Views: 1,079









