ಚಿಕ್ಕಮಗಳೂರು : ಚಿಕ್ಕಮಗಳೂರಿನ ರಾಂಪುರದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಗೋಬ್ಯಾಕ್ ಘೋಷಣೆ ಕೂಗಿದ್ದಾರೆ. ಇದರ ಪರಿಣಾಮ ಎಂಎಲ್ಸಿ ಸಿ.ಟಿ.ರವಿ ಎದುರೇ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದು, ಹೈಡ್ರಾಮಾ ಸೃಷ್ಟಿಯಾಗಿದೆ.
ರಾಂಪುರದಿಂದ ಶಕ್ತಿ ನಗರದವರೆಗೂ ಕಾಮಗಾರಿಗಳ ವೀಕ್ಷಣೆ ಮಾಡಿ ಸಿ.ಟಿ. ರವಿ ವಾಪಸ್ ಬರುತ್ತಿದ್ದ ವೇಳೆ ರಾಂಪುರ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಎದುರಾಗಿದ್ದು, ಎರಡೂ ಕಡೆಯಿಂದ ಘೋಷಣೆಗಳು ಮೊಳಗಿವೆ.
ಇದು ವಿಕೋಪಕ್ಕೆ ಹೋಗಿ ಸಿ.ಟಿ. ರವಿ ಸಮ್ಮುಖದಲ್ಲಿಯೇ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು MLC ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಬಿಜೆಪಿ ಕಾರ್ಯಕರ್ತರು ಮತ್ತು ಸಿ.ಟಿ ರವಿ ರಸ್ತೆ ಮಧ್ಯೆ ಧರಣಿ ಕುಳಿತ ಘಟನೆ ನಡೆದಿದೆ.
ಇದನ್ನೂ ಓದಿ : ವಿಜಯ್ ಸಂಪುಟ ವಿಸ್ತರಣೆ – 21 ಟಿವಿಕೆ, ಇಬ್ಬರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ!









