ವಿಜಯಪುರ : ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ.

ಮಹಾದೇವಿ ವಾರದ (55) ಮೃತ ದುರ್ದೈವಿ. ಮೊನ್ನೆ ಸುರಿದ ಮಳೆಗೆ ನೆನೆದಿದ್ದ ಹಳೆಯ ಮನೆ ಮೇಲ್ಛಾವಣಿ ಕುಸಿದು ಈ ಅನಾಹುತ ಸಂಭವಿಸಿದೆ. ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ನಸುಕಿನ ಜಾವ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್!
Author: Btv Kannada
Post Views: 278









