ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್.18 ರಂದು ಚುನಾವಣೆ!

ಬೆಂಗಳೂರು : ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್.18 ರಂದು ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಘೋಷಿಸಿದೆ.

ಕರ್ನಾಟಕದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದ್ದು, ನಾಮನಿರ್ದೇಶನಗಳನ್ನು ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ.

ಇನ್ನು ಜೂನ್ 21 ರಿಂದ ಜುಲೈ 19 ರವರೆಗೆ ವಿವಿಧ ದಿನಾಂಕಗಳಲ್ಲಿ ನಿವೃತ್ತರಾಗಲಿರುವ 10 ರಾಜ್ಯಗಳಲ್ಲಿ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ನಾಲ್ಕು ಸ್ಥಾನಗಳು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು, ಜಾರ್ಖಂಡ್‌ನಲ್ಲಿ ಎರಡು ಸ್ಥಾನಗಳು ಮತ್ತು ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂನಲ್ಲಿ ತಲಾ ಒಂದು ಸ್ಥಾನಕ್ಕೆ ರಾಜ್ಯಸಭಾ ಚುನಾವಣೆ ನಡೆಯಲಿದೆ.

ಇದನ್ನೂ ಓದಿ : ಮುತಾಲಿಕ್, ಚೈತ್ರಾ ಕುಂದಾಪುರ ಸೇರಿ 52 ಕ್ರಿಮಿನಲ್ ಕೇಸ್ ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ!

Btv Kannada
Author: Btv Kannada

Leave a Comment

Read More