ಬೆಂಗಳೂರು : SC-ST ದೌರ್ಜನ್ಯ ಪ್ರಕರಣದಲ್ಲಿ BJP ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಶಾಸಕ ಮುನಿರತ್ನ ವಿರುದ್ಧದ SC-ST ದೌರ್ಜನ್ಯ ಕೇಸನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೋಷಾರೋಪ ಪಟ್ಟಿಯಲ್ಲಿ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಕೋರ್ಟ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಕರಣದ ಹಿನ್ನೆಲೆ ಏನು?
ಮಾಜಿ ಕಾರ್ಪೊರೇಟರ್ ವೇಲು ನಾಯಕರ್ ಅವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ SC-ST ದೌರ್ಜನ್ಯ ತಡೆ ಕಾಯ್ದೆಯಡಿ (ಅಟ್ರಾಸಿಟಿ) ಪ್ರಕರಣ ದಾಖಲಾಗಿತ್ತು. ಮುನಿರತ್ನ ಅವರು ಜಾತಿ ನಿಂದನೆ ಮಾಡಿದ್ದಾರೆ ಮತ್ತು ತಮಗೆ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸುದೀರ್ಘ ವಿಚಾರಣೆ ನಡೆಸಿದ್ದು, ಇದೀಗ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶಾಸಕ ಮುನಿರತ್ನ ವಿರುದ್ಧದ SC-ST ದೌರ್ಜನ್ಯ ಕೇಸನ್ನು ಕೋರ್ಟ್ ವಜಾಗೊಳಿಸಿದೆ.
ಇದನ್ನೂ ಓದಿ : ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ – ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ!








