ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ – 82 ಜನ ಸಾವು!

ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ನಿನ್ನೆ ಭೀಕರ ಅನಿಲ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 82 ಜನರು ಸಾವನ್ನಪ್ಪಿದ್ದಾರೆ.

ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಶುಕ್ರವಾರ ಸಂಜೆ 7:29 ಕ್ಕೆ ಸ್ಫೋಟ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಸುಮಾರು 247 ಕಾರ್ಮಿಕರು ನೆಲದಡಿಯಲ್ಲಿದ್ದು, ಶನಿವಾರ ಮುಂಜಾನೆಯ ಹೊತ್ತಿಗೆ 201 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ನಾಪತ್ತೆಯಾದ ಒಂಬತ್ತು ಜನರಿಗಾಗಿ ರಕ್ಷಣಾ ಸಿಬ್ಬಂದಿ ತೀವ್ರ ಹುಡುಕಾಟ ನಡೆಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ತಿಳಿಸಿದ್ದಾರೆ. ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಕರೆ ನೀಡಿದ್ದಾರೆ.

ಚೀನಾದ ಒಟ್ಟು ರಾಷ್ಟ್ರೀಯ ಉತ್ಪಾದನೆಯ ಮೂರನೇ ಒಂದು ಭಾಗದಷ್ಟು (1.3 ಬಿಲಿಯನ್ ಟನ್) ಕಲ್ಲಿದ್ದಲನ್ನು ಉತ್ಪಾದಿಸುವ ಅತ್ಯಂತ ಪ್ರಮುಖ ಶಾಂಕ್ಸಿ ಪ್ರಾಂತ್ಯದಲ್ಲಿ ಈ ದುರಂತ ಸಂಭವಿಸಿದ್ದು, ಸ್ಫೋಟದ ನಿಖರ ಕಾರಣಕ್ಕಾಗಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಲೇಹ್​ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ – ಕೂದಲೆಳೆ ಅಂತರದಲ್ಲಿ ಪಾರಾದ ಸೇನಾ ಅಧಿಕಾರಿಗಳು!

Btv Kannada
Author: Btv Kannada

Leave a Comment

Read More