ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್ ಸಂಬಂಧ ಓರ್ವ ಸಬ್ ಇನ್ಸ್ಪೆಕ್ಟರ್ ಸೇರಿ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಪತ್ತೆ ಸಂಬಂಧ 6 ಮಂದಿ ಪೊಲೀಸರನ್ನು ಸಸ್ಪೆಂಡ್ ಮಾಡಿ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಆದೇಶಿಸಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಪಿಎಸ್ಐ, ಓರ್ವ ASI, ನಾಲ್ವರು ಕಾನ್ಸ್ಟೇಬಲ್ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಇವರೆಲ್ಲರನ್ನೂ ಮೇ 10ರಂದು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿತ್ತು. ಸ್ಫೋಟಕ ಪತ್ತೆಯಾದ ಸ್ಥಳದ ಬಳಿಯೇ ಇವರು ಭದ್ರತೆ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅಲರ್ಟ್ ಇರಲಿಲ್ಲ ಮತ್ತು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣ ನೀಡಿ 6 ಮಂದಿಯನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ : ಸೆನ್ಸಾರ್ ಅಂಗಳಕ್ಕೆ ಕಾಲಿಟ್ಟ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ!
Author: Btv Kannada
Post Views: 676









