ಬೆಂಗಳೂರು : ಬೆಂಗಳೂರು ನಗರದಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮೇ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ಇಡೀ ವಾರ ನಗರದಾದ್ಯಂತ ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 25ರಂದು ಉತ್ತರ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನದ ವೈಪರೀತ್ಯದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರಿನಾದ್ಯಂತ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಉಷ್ಣಾಂಶವು ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ಈ ಹಿಂದೆ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದ್ದ ಗರಿಷ್ಠ ತಾಪಮಾನವು ಸದ್ಯ 30 ಡಿಗ್ರಿ ಸೆಲ್ಸಿಯಸ್‌ಗಿಂತ ಕೆಳಗೆ ಇಳಿದಿದೆ.
ಇದನ್ನೂ ಓದಿ : ಬೆಂಗಳೂರಿನ ಈ ಪ್ರಮುಖ ರಸ್ತೆ 60 ದಿನಗಳ ಕಾಲ ಕ್ಲೋಸ್ – ಇಲ್ಲಿದೆ ಬದಲಿ ಮಾರ್ಗಗಳ ಮಾಹಿತಿ!








