ಪಿ.ಸಿ ಶೇಖರ್ ನಿರ್ದೇಶನದ, ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ “ಮಹಾನ್” ಚಿತ್ರದ ನಾಯಕನಾಗಿ ನಟ ವಿಜಯ ರಾಘವೇಂದ್ರ ನಟಿಸಿದ್ದಾರೆ. ರೈತರ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ರೈತನ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ.

ನಟ ವಿಜಯ ರಾಘವೇಂದ್ರ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ “ಮಹಾನ್” ಚಿತ್ರದ ವಿಜಯ ರಾಘವೇಂದ್ರ ಅವರ ವಿಶೇಷ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಪ್ರಕಾಶ್ ಬುದ್ದೂರು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಜನಪ್ರಿಯರಾಗಿರುವ ಪಿ.ಸಿ.ಶೇಖರ್ ನಿರ್ದೇಶನದ ಹನ್ನೊಂದನೆ ಚಿತ್ರವಿದು. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ : KSHRC ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ!









