ಕರ್ನಾಟಕದ DPR ತಿರಸ್ಕರಿಸಿ – ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್!

ಚೆನ್ನೈ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ವಿಜಯ್‌ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ತಮಿಳುನಾಡು ಒಪ್ಪಿಗೆಯನ್ನು ಪಡೆಯದೆ ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಬೇಕು ಎಂದು ವಿಜಯ್ ಅವರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ. ಇದರೊಂದಿಗೆ ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು (DPR) ತಕ್ಷಣವೇ ತಿರಸ್ಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವಾಲಯ ಮತ್ತು ಕೇಂದ್ರ ಜಲ ಆಯೋಗದ (CWC) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕೆಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ :ಬೆಂಗಳೂರಲ್ಲಿ ‘ಪೆದ್ದಿ’ ಪ್ರಮೋಷನ್ – ರಾಮ್ ಚರಣ್​ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ!

Btv Kannada
Author: Btv Kannada

Leave a Comment

Read More

Read More