ಸಂಚಿತ್ ಸಂಜೀವ್ ಚೊಚ್ಚಲ ಸಿನಿಮಾ ‘ಮ್ಯಾಂಗೋ ಪಚ್ಚ’ ಟ್ರೇಲರ್ ಔಟ್ – ಖಡಕ್ ಲುಕ್‌ನಲ್ಲಿ ಜೂ.ಕಿಚ್ಚ!

ನಟ ಕಿಚ್ಚ ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ‘ಮ್ಯಾಂಗೋ ಪಚ್ಚ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್‌ನಲ್ಲಿ ಜೂನಿಯರ್ ಕಿಚ್ಚ ಖಡಕ್ ಲುಕ್‌ನಲ್ಲಿ ಕಾಣಿಸಿಕೊಂಡು ತಮ್ಮ ಖದರ್ ತೋರಿಸಿದ್ದಾರೆ.

ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳು ಕೈಜೋಡಿಸಿವೆ. ವಿವೇಕ್ ನಿರ್ದೇಶನದ ಈ ಚಿತ್ರವನ್ನ ಕೆಆರ್‌ಜಿ ಸ್ಟುಡಿಯೋಸ್ ಹಾಗೂ ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿವೆ. ಚಿತ್ರದ ಟ್ರೇಲರ್ ಸದ್ಯ ಸಿನಿಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

2001 ರಿಂದ 2011ರ ಅವಧಿಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಟ್ರೇಲರ್ ಮೂಲಕ ಭರವಸೆ ಮೂಡಿಸಿರುವ ‘ಮ್ಯಾಂಗೋ ಪಚ್ಚ’ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್ 5 ರಂದು ಸಿನಿಮಾ ರಾಜ್ಯಾದ್ಯಂತ ಬೆಳ್ಳಿಪರದೆಗೆ ಅಪ್ಪಳಿಸಲಿದೆ.

ಕಿಚ್ಚ ಸುದೀಪ್ ಅವರು ಈ ಚಿತ್ರದ ನಿರೂಪಣೆ ಮಾಡಿದ್ದು, ಚರಣ್ ರಾಜ್ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಹಾಗೂ ಸ್ವಾಮಿ ಈ ಚಿತ್ರಕ್ಕೆ ಕ್ಯಾಮರಾವರ್ಕ್ ಮಾಡಿದ್ದಾರೆ.

ಇದನ್ನೂ ಓದಿ : ವಿಧಾನ ಪರಿಷತ್ ಚುನಾವಣೆ – ಹಿರಿಯ ನಟಿ ಶ್ರುತಿಗೆ ಒಲಿದ ಅದೃಷ್ಟ.. BJPಯಿಂದ ಶ್ರುತಿಗೆ MLC ಟಿಕೆಟ್!

Btv Kannada
Author: Btv Kannada

Leave a Comment

Read More

Read More