ಸಿಎಂ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿಕೆಶಿ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಉಪಹಾರ ಕೂಟ ಆಯೋಜಿಸಿದ್ದು, ಸಿದ್ದರಾಮಯ್ಯ ಅವರು ಮಧ್ಯಾಹ್ನ ನಂತರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್​ಫಾಸ್ಟ್​ ಮೀಟಿಂಗ್​​ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆಗಮಿಸಿದರು. ಈ ವೇಳೆ ಡಿಕೆಶಿ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ‌ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ ಅಕ್ಕಪಕ್ಕ ಕುಳಿತ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಪರಮೇಶ್ವರ್‌ ಕುಳಿತಿದ್ದಾರೆ.

ಡಿಕೆ ಶಿವಕುಮಾರ್, ಪರಮೇಶ್ವರ್‌, ಭೈರತಿ ಸುರೇಶ್, ಸಂತೋಷ್ ಲಾಡ್, ಎಂಸಿ ಸುಧಾಕರ್, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಎಸ್‌ಎಸ್‌ ಮಲ್ಲಿಕಾರ್ಜುನ್‌, ಕೆಜೆ ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಚೆಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಕರ್, ದರ್ಶಾನಪುರ, ಮಧು ಬಂಗಾರಪ್ಪ, ಸತೀಶ್ ಜಾರಕಿಹೋಳಿ, ಮಹದೇವಪ್ಪ, ಮಂಕಾಳ್ ವೈದ್ಯ, ತಿಮ್ಮಾಪುರ್, ಶರಣು ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುನಿಯಪ್ಪ, ಹೆಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಬೋಸರಾಜು ಬ್ರೇಕ್​ಫಾಸ್ಟ್​ ಮೀಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ “ಲಂಬೋದರ 2.0” ಚಿತ್ರಕ್ಕೆ ಬಾಲಿವುಡ್ ನಟ ಕುನಾಲ್ ಕಪೂರ್ ಸೇರ್ಪಡೆ!

Btv Kannada
Author: Btv Kannada

Leave a Comment

Read More

Read More