ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಕೊನೆಯ ದಿನದಂದು ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯದ ವಿವಿಧ ಇಲಾಖೆಗಳ ನೂರಾರು ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಧ್ಯರಾತ್ರಿಯೇ ಈ ಬೃಹತ್ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿದ್ದು, ಇದು ಆಡಳಿತ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಸರ್ವೆ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳ ಒಂದು ಸಾವಿರಕ್ಕೂ ಹೆಚ್ಚು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳ 27 ತಹಶೀಲ್ದಾರ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ರಾಜಕೀಯ ಬೆಳವಣಿಗೆಗಳ ನಡುವೆ ತಮ್ಮ ಅಧಿಕಾರದ ಕಡೆಯ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಮುಖ್ಯಮಂತ್ರಿಗಳ ಈ ದಿಢೀರ್ ನಡೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
35 ಮಂದಿ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ



ಐಎಎಸ್ ಅಧಿಕಾರಿಗಳ ವರ್ಗಾವಣೆ :


5 ಮಂದಿ ಡಿವೈಎಸ್ಪಿಗಳ ವರ್ಗಾವಣೆ :


27 ತಹಶೀಲ್ದಾರ್ ಅಧಿಕಾರಿಗಳ ವರ್ಗಾವಣೆ :












