ಬೆಂಗಳೂರು : ಕರ್ನಾಟಕದಲ್ಲಿ ಸಿಎಂ ಕುರ್ಚಿ ಸಮರಕ್ಕೆ ಕೊನೆಗೂ ತೆರೆಬಿದ್ದಿದೆ. ನಿನ್ನೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ.

ಡಿಕೆ ಶಿವಕುಮಾರ್ಗೆ ವೈಶಾಖ ಹುಣ್ಣಿಮೆ ದಿನ ಹುಟ್ಟಿದ ಮೊಮ್ಮಗಳ ಕಾಲ್ಗುಣದಿಂದಲೇ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ. ಇತ್ತೀಚೆಗಷ್ಟೇ ಮನೆಯಲ್ಲಿ ಜನಿಸಿದ ಮೊಮ್ಮಗಳ ಅದೃಷ್ಟದಿಂದಾಗಿ ರಾಜ್ಯದ ಮುಂದಿನ ಸಾರಥಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಚುಕ್ಕಾಣಿ ಹಿಡಿಯುವುದು ಈಗ ಅಧಿಕೃತವಾಗಿದೆ.
ಡಿ.ಕೆ. ಶಿವಕುಮಾರ್ ಅವರ ಆಪ್ತ ಜ್ಯೋತಿಷಿಗಳ ಲೆಕ್ಕಾಚಾರದ ಪ್ರಕಾರ, ಡಿಕೆಶಿ ಅವರಿಗೆ ಸತತ 7 ವರ್ಷಗಳ ಕಾಲ ರಾಜಯೋಗ ಇದೆ. ಅಂದರೆ ಸತತ ಏಳು ವರ್ಷಗಳ ಕಾಲ ಅವರು ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ.

ಪ್ರಸ್ತುತ ಬಾಕಿ ಉಳಿದಿರುವ ಅವಧಿಗೆ ಮಾತ್ರವಲ್ಲದೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಲಿದೆ. ಎರಡೂ ಅವಧಿಗಳನ್ನು ಸೇರಿಸಿ ಸತತ 7 ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ ಯಾವುದೇ ವಿಘ್ನವಿಲ್ಲದೆ ಮುಂದುವರೆಯಲಿದ್ದಾರೆ.
ರಾಜ್ಯದಲ್ಲಿ ಏಳು ವರ್ಷಗಳ ಕಾಲ ಅಧಿಕಾರ ನಡೆಸಲು ಡಿ.ಕೆ ಶಿವಕುಮಾರ್ ಸಜ್ಜಾಗುತ್ತಿದ್ದಾರೆ. ಸೋಮವಾರ ಸಂಜೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲು ಆಪ್ತ ಜೋತಿಷಿಗಳು ಸಲಹೆ ನೀಡಿದ್ದಾರೆ.

ಜ್ಯೋತಿಷಿಗಳ ಬಲವಾದ ಸಲಹೆ ಹಾಗೂ ಭವಿಷ್ಯದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸುದೀರ್ಘ 7 ವರ್ಷಗಳ ಕಾಲ ಸುಭದ್ರ ಹಾಗೂ ಬಲಿಷ್ಠ ಆಡಳಿತ ನಡೆಸಲು ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ರಾಜಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭದ ಮೇಲೆ ಈಗ ಇಡೀ ರಾಜ್ಯದ ಕಣ್ಣು ನೆಟ್ಟಿದೆ.
ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್!








