ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ – ಸಿಎಲ್​​ಪಿ ಸಭೆಯಲ್ಲಿ ಅಧಿಕೃತ ಘೋಷಣೆ!

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗೋದು ಫಿಕ್ಸ್ ಆಗಿತ್ತು. ಆದರೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿದೆ.

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸೋದು ನಿಶ್ಚಿತವಾಗಿದೆ. ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ ಮಾರ್ಗದರ್ಶನ ಮತ್ತು ಶುಭ ಮುಹೂರ್ತದ ಆಧಾರದ ಮೇಲೆ ಈ ದಿನಾಂಕ ಫೈನಲ್​​ ಆಗಿದೆ. ಬುಧವಾರ  ಸಂಜೆ ಡಿಕೆ ಶಿವಕುಮಾರ್‌  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ ನಡೆಯಲಿರುವ  ಸರಳ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. 

ಇದನ್ನೂ ಓದಿ : ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು – 9 ಮಂದಿ ಶಂಕಿತ ಉಗ್ರರು ಅರೆಸ್ಟ್!

Btv Kannada
Author: Btv Kannada

Leave a Comment

Read More

Read More