ಬೆಂಗಳೂರು : ಬಿಟ್ ಕಾಯಿನ್ ಬಹುಕೋಟಿ ಹಗರಣ ಕೇಸ್ನಲ್ಲಿ ಮೊಹಮ್ಮದ್ ನಲಪಾಡ್ಗೆ ಜಾರಿ ನಿರ್ದೇಶನಾಲಯ ಮತ್ತೆ ಶಾಕ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ED ಅಧಿಕಾರಿಗಳು ನಲಪಾಡ್ಗೆ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದಾರೆ.
ಕಳೆದ ಬಾರಿ ED ನೀಡಿದ್ದ ಮೊದಲ ನೋಟಿಸ್ಗೆ ಮೊಹಮ್ಮದ್ ನಲಪಾಡ್ ಅವರು ರಾಜಕೀಯ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಈಗ ಎರಡನೇ ಬಾರಿಗೆ ಸಮನ್ಸ್ ನೀಡಿದ್ದು, ಸೋಮವಾರ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಕಳೆದ ತಿಂಗಳು ಬಿಟ್ಕಾಯಿನ್ ಹಗರಣದ ತನಿಖೆಯನ್ನು ಚುರುಕುಗೊಳಿಸಿದ್ದ ED ಅಧಿಕಾರಿಗಳು ಮೊಹಮ್ಮದ್ ನಲಪಾಡ್, ಶ್ರೀಕಿ ಮನೆ ಮೇಲೆ ದಾಳಿ ಮಾಡಿದ್ದರು. ಈಗಾಗಲೇ ಈ ಹಗರಣದ ಆರೋಪಿಗಳಾದ ಶ್ರೀಕಿ, ಸುಕೇಶ್ ಹೆಗ್ಡೆ, ರಾಬಿನ್ ಖಂಡೇವಾಲನನ್ನು ಬಂಧಿಸಿ, ಎರಡನೇ ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ರು. ಈ ನಡುವೆ ಮೊಹಮ್ಮದ್ ನಲಪಾಡ್ಗೆ ED ಅಧಿಕಾರಿಗಳು ಎರಡನೇ ಬಾರಿ ನೊಟೀಸ್ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!








