ಹಾಸನ : ಉಪತಹಶೀಲ್ದಾರ್ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್.
ತಿಮ್ಮಯ್ಯ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ. ಮೂರು ವರ್ಷಗಳ ಹಿಂದೆ ತಿಮ್ಮಯ್ಯ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ.30 ಲಾಡ್ಜ್ನಲ್ಲಿ 4 ಪುಟದ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಹೊಂಬಾಳೆ ಮ್ಯೂಸಿಕ್ನಲ್ಲಿ “ಭಾವಾಂತರ”ದ ಸಾಂಗ್ – ಟೀಸರ್ನಲ್ಲೇ ಕುತೂಹಲ ಮೂಡಿಸಿದೆ ಕಾರ್ತಿಕ್ ಶರ್ಮ ಚೊಚ್ಚಲ ನಿರ್ದೇಶನದ ಚಿತ್ರ!
Author: Btv Kannada
Post Views: 336








