ಬೆಂಗಳೂರಿನಲ್ಲಿಂದು ಭಾರೀ ಮಳೆ ಮುನ್ಸೂಚನೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!​

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ರಾಜ್ಯದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಗಾಳಿ ಸಹಿತ ಸಾಧಾರಣ ಜಿಟಿಜಿಟಿ ಮಳೆಯಾಗಬಹುದು.

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲವು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ : ಇಂದು ಆರ್​ಸಿಬಿ VS ಜಿಟಿ ಹೈವೋಲ್ಟೇಜ್ ಪಂದ್ಯ – ಬೆಂಗಳೂರಲ್ಲಿ ಸೆಲೆಬ್ರೇಷನ್​ಗೆ ಬ್ರೇಕ್​​.. ಫ್ಯಾನ್ಸ್​ಗೆ ಪೊಲೀಸರಿಂದ ಖಡಕ್​​ ವಾರ್ನಿಂಗ್!

Btv Kannada
Author: Btv Kannada

Leave a Comment

Read More

Read More