ರುಕ್ಮಿಣಿ ವಸಂತ್ ಬಿಕಿನಿ ಫೋಟೋ ವೈರಲ್‌ – ಕಿಡಿಗೇಡಿಗಳ ವಿರುದ್ಧ FIR!

ಬೆಂಗಳೂರು : ಕಾಂತಾರ ನಟಿ ರುಕ್ಮಿಣಿ ವಸಂತ್ ಅವರ ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಫೇಕ್ ವಿಡಿಯೋ ಹರಿಬಿಟ್ಟವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರುಕ್ಮಿಣಿ ವಸಂತ್‌ ನೀಡಿದ ದೂರಿನಲ್ಲಿ AI ತಂತ್ರಜ್ಞಾನ ಬಳಸಿ ನನ್ನ ಫೋಟೋವನ್ನು ಬಿಕಿನಿ ರೀತಿ ಸೃಷ್ಟಿ ಮಾಡಿದ್ದಾರೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಬೇರೆಯೊಬ್ಬರ ದೇಹಕ್ಕೆ ನನ್ನ ಮುಖವನ್ನು ಬಳಸಿದ್ದಾರೆ. ಈ ರೀತಿ ನಕಲಿ ವಿಡಿಯೋ ಮತ್ತು ಪೊಟೊವನ್ನು ಸೃಷ್ಟಿ ಮಾಡಿದ್ದಾರೆ. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು.

ರುಕ್ಮಿಣಿ ವಸಂತ್ ನೀಡಿದ ದೂರಿನನ್ವಯ ಪೊಲೀಸರು ಒಟ್ಟು 29 ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇದರಲ್ಲಿ 9 ಇನ್‌ಸ್ಟಾಗ್ರಾಮ್ ಅಕೌಂಟ್‌ಗಳು, 14 ಟ್ವಿಟರ್ ಅಕೌಂಟ್‌ಗಳು ಹಾಗೂ 6 ಫೇಸ್‌ಬುಕ್ ಪೇಜ್‌ಗಳು ಸೇರಿವೆ. ಸೈಬರ್ ಪೊಲೀಸರು ಐಟಿ ಆ್ಯಕ್ಟ್ 66C, 66D ಹಾಗೂ ಬಿಎನ್‌ಎಸ್ (BNS) ಸೆಕ್ಷನ್ 75(3), 79, 336, 356, 351, 352 ಮತ್ತು 294ರ ಅಡಿಯಲ್ಲಿ ಮೊಕದ್ದಮೆ ಹೂಡಿ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೇಸ್ ಫೈಲ್ 59ನೇ ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ – ಜೂ.15ಕ್ಕೆ ವಿಚಾರಣೆ ಮುಂದೂಡಿಕೆ!

Btv Kannada
Author: Btv Kannada

Leave a Comment

Read More