ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಪೂರ್ಣ ಕೇಸ್ ಫೈಲ್ ಅನ್ನು 59ನೇ ಸೆಷನ್ಸ್ ಕೋರ್ಟ್‌ಗೆ ವರ್ಗಾಯಿಸಲು 64ನೇ ಸೆಷನ್ಸ್ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.
ಇತ್ತೀಚೆಗಷ್ಟೇ ಸೆಷನ್ಸ್ ಕೋರ್ಟ್‌ಗಳ ಮರು ನಿಯೋಜನೆ ಪ್ರಕ್ರಿಯೆ ನಡೆದ ಹಿನ್ನೆಲೆಯಲ್ಲಿ, ನಟ ದರ್ಶನ್ ಮತ್ತು ಗ್ಯಾಂಗ್ ಮೇಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು 59ನೇ ಸೆಷನ್ಸ್ ಕೋರ್ಟ್‌ಗೆ ನಿಗದಿಪಡಿಸಲಾಗಿದೆ. ಹೀಗಾಗಿ ಪ್ರಕರಣದ ಎಲ್ಲಾ ದಾಖಲೆಗಳನ್ನು ವರ್ಗಾಯಿಸುವಂತೆ ಈಗ ಆದೇಶಿಸಲಾಗಿದೆ.
ಮುಂದಿನ ವಿಚಾರಣೆ ವೇಳೆ ಪ್ರಕರಣದ ಎಲ್ಲಾ ಆರೋಪಿಗಳನ್ನು 59ನೇ ಕೋರ್ಟ್‌ಗೆ ಹಾಜರುಪಡಿಸುವಂತೆ ಕಾಮಾಕ್ಷಿಪಾಳ್ಯ ಪೊಲೀಸರು ಕಾರಾಗೃಹ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿನ್ನೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯನ್ನು ಜೂನ್ 15ಕ್ಕೆ ಮುಂದೂಡಿದೆ.
ಇದನ್ನೂ ಓದಿ : ರಾಜ್ಯದಲ್ಲಿಂದು ಭಾರೀ ಮಳೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Author: Btv Kannada
Post Views: 796









