ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ – ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ!

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಸಂಜೆ 4:05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿಯ ಲೋಕಭವನದಲ್ಲಿ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ ಮೂರು ರೀತಿ ಪಾಸ್ ನೀಡಲು ಸಿದ್ಧತೆ ನಡೆದಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಯಾವುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : ಜೂ.18ರಂದು ವಿಧಾನ ಪರಿಷತ್‌, ರಾಜ್ಯಸಭೆ ಚುನಾವಣೆ – ನಾಮಪತ್ರ ಸಲ್ಲಿಕೆಗೆ ಜೂ.8 ಕೊನೇ ದಿನ!

Btv Kannada
Author: Btv Kannada

Leave a Comment

Read More