ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌!

ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು,  ಗಂಗಾಧರಜ್ಜನ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಸಿಎಂ ಆಗಿ ಡಿಕೆಶಿ ಪ್ರಮಾಣವಚನಕ್ಕೆ ಗಣ್ಯಾತಿ ಗಣ್ಯರು ಸಾಕ್ಷಿಯಾಗಿದ್ದಾರೆ. ಕಾಂಗ್ರೆಸ್​​ ವರಿಷ್ಠ ರಾಹುಲ್​​ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್​​, ತೆಲಂಗಾಣ ಸಿಎಂ ರೇವಂತ್​​ ರೆಡ್ಡಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್​ ರೆಡ್ಡಿ ಕೇರಳಂ ಸಿಎಂ ಸತೀಶನ್​,  ಕಾಂಗ್ರೆಸ್ ನಾಯಕರಾದ ಹರಿಪ್ರಸಾದ್​, ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್​​ಗಳ ಮುಖ್ಯಸ್ಥರು, ಸಿನಿ ತಾರೆಯರು ಸೇರಿ ಡಿಕೆಶಿ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇದನ್ನೂ ಓದಿ : ಹಿರಿಯ ವಕೀಲ ಶಾಂತಿ ಭೂಷಣ್ ಸೇರಿ 6 ಮಂದಿ ಹೈಕೋರ್ಟ್​ನ ನ್ಯಾಯಮೂರ್ತಿಗಳಾಗಿ ನೇಮಕ!

Btv Kannada
Author: Btv Kannada

Leave a Comment

Read More