ಡಿಕೆಶಿ ಪದಗ್ರಹಣ – ಲೋಕಭವನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.. 2000ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ!

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದೆ. ಸಮಾರಂಭ ನಡೆಯಲಿರುವ ಲೋಕಭವನ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. 

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ 2,000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ ಜಾಗವನ್ನು ವಿವಿಧ ಸೆಕ್ಟರ್‌ಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಂದೋಬಸ್ತ್‌ಗಾಗಿ 3 ಮಂದಿ ಜಂಟಿ ಪೊಲೀಸ್ ಆಯುಕ್ತರು, 20ಕ್ಕೂ ಹೆಚ್ಚು ಡಿಸಿಪಿಗಳು, 50ಕ್ಕೂ ಹೆಚ್ಚು ಎಸಿಪಿಗಳು, 100ಕ್ಕೂ ಹೆಚ್ಚು ಇನ್ಸ್‌ಪೆಕ್ಟರ್‌ಗಳು, 300ಕ್ಕೂ ಹೆಚ್ಚು ಪಿಎಸ್‌ಐಗಳು, 700ಕ್ಕೂ ಹೆಚ್ಚು ಕಾನ್ಸ್‌ಟೇಬಲ್‌ಗಳು ಹಾಗೂ ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭದ್ರತೆಯ ಉಸ್ತುವಾರಿಗಾಗಿ ಪ್ರತಿ ಸೆಕ್ಟರ್‌ಗೂ ಓರ್ವ ಡಿಸಿಪಿ ದರ್ಜೆಯ ಅಧಿಕಾರಿಗೆ ನೇತೃತ್ವದ ಜವಾಬ್ದಾರಿ ನೀಡಲಾಗಿದೆ.

ಇದನ್ನೂ ಓದಿ : ಇಂದು ಸಚಿವರ ಪಟ್ಟಿ ಪ್ರಕಟ – ಸಿಎಲ್​ಪಿ ನಾಯಕ ಡಿಕೆಶಿ!

Btv Kannada
Author: Btv Kannada

Leave a Comment

Read More