ಡಿಕೆಶಿ ಕ್ಯಾಬಿನೆಟ್​ನ ಸಚಿವರಾಗಿ 12 ಶಾಸಕರು ಪ್ರಮಾಣವಚನ ಸ್ವೀಕಾರ!

ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಜೊತೆಗೆ ಡಿಸಿಎಂ ಆಗಿ ಡಾ. ಜಿ ಪರಮೇಶ್ವರ್‌ ಹಾಗೂ 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ 13 ಶಾಸಕರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ : ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅಭಿನಂದಿಸಿದ ಪ್ರಧಾನಿ ಮೋದಿ!

Btv Kannada
Author: Btv Kannada

Leave a Comment

Read More