ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆರವೇರಲಿದ್ದು, ಶಿವಕುಮಾರ್ ಜೊತೆಗೆ 10 ರಿಂದ 12 ಜನ ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಇನ್ನು ಡಿಕೆಶಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಯಿದೆ.
ಇದನ್ನೂ ಓದಿ : “ಬಲರಾಮನ ದಿನಗಳು” ಸಿನಿಮಾ ಜೂ.26ಕ್ಕೆ ರಿಲೀಸ್!
Author: Btv Kannada
Post Views: 479









