ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಅಭಿನಂದಿಸಿದ ಪ್ರಧಾನಿ ಮೋದಿ!

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ. 

ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್​ಗೆ ಅಭಿನಂದನೆಗಳು. ಜನರ ಕಲ್ಯಾಣಕ್ಕಾಗಿ ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತದೆ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ಬಳಿಕ ಡಾ. ಜಿ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಇದನ್ನೂ ಓದಿ : ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ!

Btv Kannada
Author: Btv Kannada

Leave a Comment

Read More