ರಾಜ್ಯದ ನೂತನ ಡಿಸಿಎಂ ಆಗಿ ಜಿ. ಪರಮೇಶ್ವರ್‌ ಪ್ರಮಾಣವಚನ ಸ್ವೀಕಾರ!

ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು ಬಳಿಕ ಡಾ ಜಿ ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಡಿಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು.

ಇನ್ನು ಡಿಕೆಶಿ ಸಂಪುಟ ಸಚಿವರಾಗಿ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಡಾ.ಜಿ.ಪರಮೇಶ್ವರ್ ಅವರು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿದ್ದು, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ರು. 1993ರಲ್ಲಿ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ರು. 1999 ಮತ್ತು 2004ರಲ್ಲಿ ಮಧುಗಿರಿಯಲ್ಲಿ ಮತ್ತೆ ಗೆಲುವು ಸಾಧಿಸಿದ್ರು. 2008ರಲ್ಲಿ ಕ್ಷೇತ್ರ ಬದಲಾಯಿಸಿ ಕೊರಟಗೆರೆಯಿಂದ ಸ್ಪರ್ಧಿಸಿದ್ದರು.

2010ರಿಂದ 2018ರವರೆಗೂ KPCC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪರಮೇಶ್ವರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಆಗಿದ್ರು. ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವಿಜ್ಞಾನತಂತ್ರಜ್ಞಾನ ಸಚಿವರಾಗಿ, ಬೆಂಗಳೂರು ಅಭಿವೃದ್ಧಿ ಸಚಿವರಾಗಿಯೂ ಪರಮೇಶ್ವರ್‌ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್‌!

Btv Kannada
Author: Btv Kannada

Leave a Comment

Read More